ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ.

BREAKING NEWS: ಮಹಾರಾಷ್ಟ್ರದಲ್ಲಿ ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ, ಪೈಲೆಟ್ ಗೆ ಗಾಯ | Indian Air Force Small Trainer Aircraft Crashes

ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.

BIGG NEWS: ನನಗೆ ಇಡೀ ಕರ್ನಾಟಕದ ಮೇಲೆ ಒಲವಿದೆ; ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಯಾವುದೆ ಗೊಂದಲವಿಲ್ಲ- ಬಿ.ವೈ.ವಿಜಯೇಂದ್ರ

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆ

BIG BREAKING NEWS: ಜುಲೈ.30ರಂದು ‘ಸಿಇಟಿ ಫಲಿತಾಂಶ’ ಪ್ರಕಟ | KCET-2022 Results

Share.
Exit mobile version