ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಇಂದು ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. 9 ವರ್ಷದ ಭಾವನಾ ಎಂಬ ವಿದ್ಯಾರ್ಥಿನೀ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಇದರ ಬೆನ್ನಲ್ಲೆ ಇದೀಗ ಬಿಎಂಟಿಸಿ ಚಾಲಕ ಮತ್ತೊಂದು ಯಡವಟ್ಟು ಮಾಡಿರುವ ಘಟನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ.
ಹೌದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿ ಏಕಾಏಕಿ ಬಂದು 9 ವಾಹನಗಳಿಗೆ ಬಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಆಟೋ 3 ಕಾರು ಹಾಗೂ ಬೈಕ್ಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಒಂದು ಆಟೋ ಸಂಪೂರ್ಣ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನನ್ನು ಕೂಡ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಘಟಕಕ್ಕೆ ಕಬ್ಬನ್ ಪಾರ್ಕ್ ಅಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.