Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪರಿಶಿಷ್ಟ ಜಾತಿ, ವರ್ಗಗಳ ಅಭಿವೃದ್ಧಿಗೆ ಹಣ ವಾಪಸ್ ಕೊಡಿ: ರಾಜ್ಯ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
KARNATAKA

ಪರಿಶಿಷ್ಟ ಜಾತಿ, ವರ್ಗಗಳ ಅಭಿವೃದ್ಧಿಗೆ ಹಣ ವಾಪಸ್ ಕೊಡಿ: ರಾಜ್ಯ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಅಭಿವೃದ್ಧಿ ವಿಚಾರವನ್ನು ಸಂಪೂರ್ಣ ಕಡೆಗಣಿಸಿದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರನ್ನೂ ವಂಚಿಸಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ; ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಸೋತಿದೆ ಎಂದು ಟೀಕಿಸಿದರು.

ಕೇವಲ 5 ಗ್ಯಾರಂಟಿಗಳು ಎಂದು ಹೇಳಿಕೊಂಡು, ಅದನ್ನೂ ಸರಿಯಾಗಿ ಜನರಿಗೆ ತಲುಪಿಸದೆ ವಂಚನೆ ಮಾಡಿದೆ. ಪರಿಶಿಷ್ಟ ಜಾತಿ- ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ 25 ಸಾವಿರ ಕೋಟಿ ಹಣವನ್ನು ಈಗಾಗಲೇ ಅವರು ಬೇರೆಬೇರೆ ಕಾರ್ಯಗಳಿಗೆ ಉಪಯೋಗ ಮಾಡಿದ್ದಾರೆ. ಈ ಮೂಲಕ ದಲಿತರನ್ನೂ ವಂಚನೆ ಮಾಡಿದ್ದಾರೆ. ಅವರಿಗೆ ಮೋಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಇದರ ವಿರುದ್ಧ ಯಶಸ್ವಿ ಹೋರಾಟ ಮಾಡಿದ್ದೇವೆ. ಪರಿಶಿಷ್ಟ ಜಾತಿ- ವರ್ಗಗಳ ಶ್ರೇಯೋಭಿವೃದ್ಧಿಗೆ ಇಟ್ಟಿರುವ ಹಣವನ್ನು ಬೇರೆ ವಿಚಾರಗಳಿಗೆ ಪೋಲು ಮಾಡಬಾರದೆಂಬುದು ನಮ್ಮ ಉದ್ದೇಶವಾಗಿತ್ತು. ಆದರೆ, ಖಜಾನೆಯಲ್ಲಿ ಹಣ ಖಾಲಿ ಇರುವ ಕಾರಣ ದಾರಿ ತಪ್ಪಿಸಿ ಈ ಪರಿಶಿಷ್ಟ ಜಾತಿ- ವರ್ಗಗಳ ಹಣವನ್ನು ತೆಗೆದು ಬೇರೆಬೇರೆ ಕಾರ್ಯಗಳಿಗೆ ಉಪಯೋಗಿಸಿ ಅವರಿಗೆ ಅನ್ಯಾಯ ಮಾಡಲಾಗುತ್ತಿತ್ತು ಎಂದು ಟೀಕಿಸಿದರು.

ಕೊನೆಗೂ ಒಂದೂವರೆ ವರ್ಷದ ಬಳಿಕ 25 ಸಾವಿರ ಕೋಟಿ ಲೂಟಿ ಆದ ಬಳಿಕ ಮುಖ್ಯಮಂತ್ರಿಗಳಿಗೆ ನಿನ್ನೆ ಮನವರಿಕೆ ಆಗಿದೆ. ನಾವು ತಪ್ಪು ಮಾಡಿದ್ದೇವೆ. ಅವರ ಹಣವನ್ನು ನಾವು ಈ ರೀತಿ ಬಳಸಬಾರದಿತ್ತು ಎಂದು ನಿನ್ನೆ ಹೇಳಿದ್ದಾರೆ. ಕೊನೆಗೂ ಅವರಿಗೆ ತಪ್ಪಿನ ಅರಿವಾಗಿದೆ. ತಪ್ಪಾಗಿದೆ ಎಂದು ಹೇಳಿ ತಪ್ಪಿಸಿಕೊಳ್ಳುವ ಕೆಲಸ ಮಾಡಬೇಡಿ; ಇಂಥ ನಯವಂಚಕತನ ಬಹಳ ಚೆನ್ನಾಗಿ ನಿಮಗೆ ಗೊತ್ತಿದೆ. 25 ಸಾವಿರ ಕೋಟಿ ಹಣವನ್ನು ಆ ಜನಾಂಗಗಳಿಗೆ ಮತ್ತೆ ವಾಪಸ್ ಕೊಡಿ ಎಂದು ಆಗ್ರಹಿಸಿದರು.

ಸದಸ್ಯತ್ವ ನೋಂದಣಿ ಸಂಬಂಧ ಬೀದರ್, ಕಲಬುರ್ಗಿ ಮತ್ತಿತರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪ್ರವಾಸ ಮಾಡಿದ್ದೇನೆ. ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಬಿಜೆಪಿ ಅತಿ ದೊಡ್ಡ ರಾಜಕೀಯ ಪಕ್ಷ ಎನಿಸಿದೆ. ಸುಮಾರು 11 ವರ್ಷಗಳ ಕಾಲ ಮಾನ್ಯ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ನಿಷ್ಕಳಂಕ ರಾಜಕಾರಣವನ್ನು ಮಾಡುತ್ತ ಬಂದಿದ್ದೇವೆ ಎಂದು ವಿವರಿಸಿದರು. ಕರ್ನಾಟಕದಲ್ಲಿ ಈ ಬಾರಿ 1 ಕೋಟಿ 80 ಲಕ್ಷ ಸದಸ್ಯರನ್ನು ನೋಂದಣಿ ಮಾಡಲು ಪಕ್ಷ ತೀರ್ಮಾನ ಮಾಡಿದೆ ಎಂದು ತಿಳಿಸಿದರು.

ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಜನಪ್ರತಿನಿಧಿಯಾಗಲು ಅನರ್ಹ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಕಿಡಿ

‘ಅಕ್ಸೆಂಚರ್ ಉದ್ಯೋಗಿ’ಗಳಿಗೆ ಬಿಗ್ ಶಾಕ್: 6 ತಿಂಗಳು ಬಡ್ತಿ ವಿಳಂಬ, ಭಾರತದಲ್ಲಿ ವೇತನವೂ ಹೆಚ್ಚಳವಿಲ್ಲ | Accenture Delays Promotions

ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs

Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.