Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ
KARNATAKA

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ

By kannadanewsnow0918/03/2025 5:47 PM

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ.

ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು.

ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ.‌ ವರ್ಷಾಂತ್ಯಕ್ಕೆ‌ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ‌ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಶಾಸಕ‌ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಅಬಕಾರಿ ಸಚಿವರೂ ಆದ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ‌ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್,‌ ಉಮಾಶ್ರೀ‌, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಕಳೆದ ಹತ್ತು ವರ್ಷಗಳಿಂದ ಚಾಲುಕ್ಯ ಉತ್ಸವವನ್ನು ಆಚರಣೆ ಮಾಡಿಲ್ಲ. ಬಾಗಲಕೋಟೆ ಜಿಲ್ಲೆ ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ಈ ಬಾರಿ ಉತ್ಸವವನ್ನು ರಾಷ್ಟ್ರದ ಗಮನ ಸೆಳೆಯುವಂತೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜೊತೆಗೆ ಬಸವಣ್ಣನವರ ತತ್ವಗಳನ್ನ ಪಸರಿಸುವ ಕೆಲಸಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಮ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಎಚ್ಚರ.! ಇನ್ಮುಂದೆ ಪೋಷಕರನ್ನು ಆರೈಕೆ ಮಾಡದ ಮಕ್ಕಳಿಗೆ ಆಸ್ತಿ ದಕ್ಕದು

‘ಟೆಂಡರ್’ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಧಾನಸಭೆಯಲ್ಲಿ ಮಸೂದೆ ಮಾಡಿಸಿದ ‘ರಾಜ್ಯ ಸರ್ಕಾರ’

Share. Facebook Twitter LinkedIn WhatsApp Email

Related Posts

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM2 Mins Read

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM1 Min Read

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM1 Min Read
Recent News

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

29/04/2026 4:13 PM

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM
State News
KARNATAKA

ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

By kannadanewsnow0929/04/2026 4:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಆರಾಧ್ಯ ದೈವ ಶ್ರೀ ಮಾರಿಕಾಂಬಾ ದೇವಿಯ ಎರಡನೇ ವರ್ಷದ ವರ್ಧಂತಿ ಉತ್ಸವವು ಮೇ 3ರಂದು…

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.