ಚಾಮರಾಜನಗರ : ರಸ್ತೆ ದಾಟುತ್ತಿದ್ದ ವೇಳೆ KSRTC ಬಸ್ ಒಂದು ಡಿಕ್ಕಿ ಹೊಡೆದು 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಮಮದಾಪೂರ ಬಳಿ ನಡೆದಿದೆ.
ಹೌದು ಚಾಮರಾಜನಗರ ತಾಲೂಕಿನ ಮಾದಾಪುರದ. ತನಿಷ್ಕಾ(6) ಮೃತ ರ್ದುದೈವಿ ಬಾಲಕಿ ಎಂದು ಹೇಳಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.