ಚಾಮರಾಜನಗರ : ಯುಗಾದಿ ಹಬ್ಬದ ಪ್ರಯುಕ್ತ ಮಳೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಮಹಿಳೆಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಳ ಗ್ರಾಮದ ಲಕ್ಷ್ಮಿ(36) ಎನ್ನುವ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಐರ್ಲೆಂಡ್ನ ಅತ್ಯಂತ ಕಿರಿಯ ಪ್ರಧಾನಿ ‘ಸೈಮನ್ ಹ್ಯಾರಿಸ್’ ಗೆ ಪ್ರಧಾನಿ ಮೋದಿ ಅಭಿನಂದನೆ
ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂತರ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಮೆರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ಶವವನ್ನು ಮಲೆ ಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಪ್ರಧಾನಿ ಮೋದಿ 41 ವರ್ಷಗಳ ಹಿಂದೆ ಬರೆದ ‘ಮಾರುತಿ ಪ್ರಾಣ ಪ್ರತಿಷ್ಠಾನ’ ಕವಿತೆ ವೈರಲ್ !
ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಿಂದ ಸುಮಾರು 20 ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವಾಗ ತಾಳು ಬೆಟ್ಟದಲ್ಲಿ ಸುಮಾರು 15ಕ್ಕೂ ಹೆಚ್ಚು ಪಾದಯಾತ್ರೆಗಳು ಹೋಗುತ್ತಿರುವುದನ್ನು ಗಮನಿಸಿದ ಇವರು ಸಹ ಪಾದಯಾತ್ರೆಯ ಮೂಲಕ ಹೋಗುವುದಕ್ಕೆ ತೀರ್ಮಾನಿಸಿ ಅವರ ಜೊತೆಯಲ್ಲಿಯೇ ಪಾದಯಾತ್ರೆಗೆ ಹೊರಟಿದ್ದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಸಂಬಂಧ ಮೃತರ ಸಹೋದರಿ ಪದ್ಮ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.