ಚಾಮರಾಜನಗರ : ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ ವಿಚಾರವಾಗಿ ಇದೀಗ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವೀರನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರೀ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದ. ಶಿವಕುಮಾರ್ ಗೆ ಜಾತಿನಿಂದನೆ ಮಾಡಿ ಕೊಲೆ ಮಾಡೋದಾಗಿ ಧಮ್ಕಿ ಹಾಕಿದ್ದಾರೆ ಈ ಹಿನ್ನೆಲೆ ಶಿವಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದ.
ಶಿವಕುಮಾರ್ ನೀಡಿದ ದೂರಿನ ಮೇರೆಗೆ ಇದೀಗ ಎಫ್ಐಆರ್ ದಾಖಲಾಗಿದೆ. 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಕೆಸ್ ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲಾಗಿದ್ದಕ್ಕೆ ವೀರನಪುರ ಗ್ರಾಮಸ್ಥರು ರೊಚ್ಚಿಗೆ ಎದ್ದಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎಸ್ಪಿ ಕಚೇರಿ ಮುತ್ತಿಗೆ ಹಾಕುವುದಾಗಿ ಆಕ್ರೋಶ ಹೊರಹಾಕಿದ್ದಾರೆ. ಶಿವಕುಮಾರ್ ಹೇಳಿಕೆಯಲ್ಲಿ ಯಾವುದೇ ಸತ್ಯಂಶವಿಲ್ಲ ಎಂದಿದ್ದಾರೆ. ಸದ್ಯ ಗ್ರಾಮಸ್ಥರ ಜೊತೆಗೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.