ಚಾಮರಾಜನಗರ : ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಬಳಿ ರಸ್ತೆ ತಿರುವಿನಲ್ಲಿ ವಾಹನ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 10 ಮಂದಿಗೆ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಪ್ರಾಥಮಿಕ ಚಿಕಿತ್ಸೆ ಪಡೆದು ಗಾಯಾಳುಗಳು ಸದ್ಯ ಮನೆಗೆ ತೆರಳಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.