ಚಾಮರಾಜನಗರ : ಕ್ರಷರ್ ಮಾಲೀಕನಿಂದ 4,500 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ನಂದರಾಜು ಎಂಬಾತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಎಂ ಸ್ಯಾಂಡ್ ಗುಣಮಟ್ಟ ಪರೀಕ್ಷಾ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷರ್ ಮಾಲೀಕ ಪ್ರಸನ್ನ ಕುಮಾರನಿಂದ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಲ್ಯಾಬ್ ಟೆಕ್ನಿಷಿಯನ್ ನಂದರಾಜುನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.