ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ನಂತ್ರ ಸ್ಪೀಕರ್ ಆಗಿ ಅವಿರೋಧವಾಗಿ ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಉಪ ಸಭಾಧ್ಯಕ್ಷರಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಆಯ್ಕೆ ಮಾಡಲಾಗಿದೆ.
ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆದ್ದಿದ್ದಂತ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಆದರೇ ಅವರನ್ನು ಡೆಪ್ಯೂಟಿ ಸ್ಪೀಕರ್ ಆಗಿ ಇಂದು ಕಾಂಗ್ರೆಸ್ ಪಕ್ಷದಿಂದ ಆಯ್ಕೆ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಾನು ಸತತ ನಾಲ್ಕನೇ ಬಾರಿ ಗೆದ್ದಿದ್ದೇನೆ. ಹಿರಿಯ ಶಾಸಕನಾಗಿದ್ದೇನೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವ ವ್ಯಕ್ತಿ ನಾನಲ್ಲ ಎಂದಿದ್ದರು.
ಅಲ್ಲದೇ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ನನಗೆ ಮಂತ್ರಿ ಸ್ಥಾನವನ್ನು ಕೊಡುವಲ್ಲಿ ಉತ್ಸುಕರಾಗಿದ್ದಾರೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಅವರನ್ನು ವಿಧಾನಸಭೆಯ ಉಪಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
9 ಪ್ರಶ್ನೆ ಹಿಡಿದು ಸವಾಲ್ ಎಸೆದ ‘ಕಾಂಗ್ರೆಸ್’ ಬೆವರಿಳಿಸಿದ ಬಿಜೆಪಿ ; ಕೊಟ್ಟ ಉತ್ತರವೇನು ಗೊತ್ತಾ.?
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಜಾಮೀನು ಅರ್ಜಿ ಹೈಕೋರ್ಟ್ ವಜಾ