ಚಾಮರಾಜನಗರ : ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರದ ಈದ್ಗ ಮೈದಾನದ ಬಂಜಾರ ಶಾಲೆಯ ಬಳಿ ವ್ಯಕ್ತಿಯ ಅನುಮಾನಸ್ಪದ ಶವ ಪತ್ತೆಯಾಗಿದೆ. ಕಾರಿನ ಚಾಲಕನ ಸೀಟ್ನಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಳೆದ ಎರಡು ದಿನಗಳಿಂದ ಕಾರು ಅಲ್ಲಿಗೆ ನಿಂತಿತ್ತು ಸಾರ್ವಜನಿಕರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ಚಾಲಕನ ಸೀಟ್ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸದ್ಯ ಪೊಲೀಸರು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ








