ಚಾಮರಾಜನಗರ : ರಾಜ್ಯದಲ್ಲಿ ಕಳೆದ ಹಲವು ತಿಂಗಳಗಳ ಹಿಂದೆ ‘ಹುಲಿ ಉಗುರು’ ಭಾರಿ ಸದ್ದು ಮಾಡಿತ್ತು. ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹನೂರು ಮುಖ್ಯರಸ್ತೆಯಲ್ಲಿನ ಲೊಕ್ಕನಹಳ್ಳಿ ಬಳಿ ನಾಲ್ಕು ಹುಲಿ ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್ ಬಿನ್ ಮಂಜು, (24), ಹೆಚ್.ಡಿ ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಕುಮಾರನಾಯಕ ಬಿನ್ ಚೆಲುವನಾಯಕ, (32) ಎಂದು ತಿಳಿದುಬಂದಿದೆ.
ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆಯಿಂದ ಲೊಕ್ಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಜಂಕ್ಷನ್ ಬಳಿ ಹುಲಿಯ 04 ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ಅರಣ್ಯ ಸಂಚಾರ ದಳದ ಪೊಲೀಸರು ದಾಳಿ ಮಾಡಿದ್ದಾರೆ.ಕೂಡಲೆ ಹುಲಿ ಉಗುರನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿ ವನ್ಯಜೀವಿ ಸಂರಕ್ಷಾಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ