ಚಾಮರಾಜನಗರ: ಸದ್ಯ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೆ ಕೂಗು ಕೇಳಿಬಂದಿದೆ. ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗಾಗಿ ಅನುಮತಿ ನೀಡುವಂತೆ ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮತ್ತೊಂದು ಪತ್ರ ಬರೆಯಲಾಗಿದೆ.
BREAKING NEWS: ಸುರತ್ಕಲ್ ನಲ್ಲಿ ಟೋಲ್ ಗೇಟ್ ತೆರವು ಕಾರ್ಯಾಚರಣೆ ಹೋರಾಟ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್.ರುಕ್ಮಾಂಗದ ಅವರು ಇಂದು ಬೆಂಗಳೂರು ನಗರ ಡಿಸಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ನ.1ರಿಂದ 30ರವರೆಗೆ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿ. ರಾಜ್ಯೋತ್ಸವ ಹಿನ್ನೆಲೆ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಬೇಕು ಎಂದು ಕೋರಿ ಪತ್ರ ಬರೆದಿದ್ದಾರೆ.
ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಕ್ಕೆ ಅನುಮತಿ ಇದೆ. ಹೀಗಾಗಿ ಸರ್ಕಾರವು ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕಿದೆ ಎಂದು ಕೆಲ ದಿನಗಳ ಹಿಂದೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಆಗ್ರಹಿಸಿದ್ದರು.