ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಮರಳಲು ವೇದಿಕೆ ಕಲ್ಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿ ಜೈಲು ಪಾಲಾದ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅಧಿಕಾರ ಗದ್ದುಗೆಗೆ ಏರಿದರು.

ಇದೀಗ ಹೇಮಂತ್ ಸೊರೆನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಜೈಲಿನಿಂದ ಬಿಡುಗಡೆ ಕೂಡ ಆಗಿದ್ದಾರೆ. ಈ ಬೆನ್ನಲ್ಲೇ ಮತ್ತೆ ಜಾರ್ಖಂಡ್ ಸಿಎಂ ಸ್ಥಾನಕ್ಕೇರುವ ತಯಾರಿ ನಡೆಯುತ್ತಿದೆ.

ಹಾಲಿ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಬುಧವಾರದಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಆ ಬಳಿಕ ಮತ್ತೆ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಸಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

‘ರೈತ’ರಿಗೆ ಬಹುಮುಖ್ಯ ಮಾಹಿತಿ: ಹವಾಮಾನ ಆಧಾರಿತ ‘ಬೆಳೆ ವಿಮೆ ನೋಂದಣಿ’ಗೆ ಅರ್ಜಿ ಆಹ್ವಾನ

Share.
Exit mobile version