ಚಾಮರಾಜನಗರ : ಜಮೀನು ವಶಪಡಿಸಿಕೊಂಡಿದ್ದಕ್ಕೆ ಮನನೊಂದು ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಳತೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಜಮೀನಿನಲ್ಲಿ ನೇಣು ಬಿಗಿದುದುಕೊಂಡು ರಾಜಮ್ಮ (52) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶಪಡಿಸಿಕೊಂಡಿದ್ದರು ಕಂದಾಯ ಇಲಾಖೆ ಅಧಿಕಾರಿಗಳು ರಾಜಮ್ಮ ಅವರ ಜಮೀನು ಹೊಸಪಡಿಸಿಕೊಂಡಿದ್ದಾರೆ.ಕಳೆದ ವಾರ ಕಂದಾಯ ಇಲಾಖೆಯ ಅಧಿಕಾರಿಗಳು ರಾಜಮ್ಮ ಅವರ ಜಮೀನು ವಶಪಡಿಸಿಕೊಂಡಿದ್ದಾರೆ. ರಾಜಮ್ಮ ಅವರ ಜಮೀನಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಜಮೀನು ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ಬೇಸತ್ತು ಇಂದು ಬೆಳಿಗ್ಗೆ ರಾಜಮ್ಮ ನೇಣು ತೆಗೆದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.