ಮೈಸೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಬಿಜೆಪಿ ಹೊಂದಿದ್ದು ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರು ರೊಂದಿಗೆ ಮೈಸೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು,ಮೈಸೂರಿನಿಂದಲೇ ಲೋಕಸಭಾ ರಣಕಹಳೆ ಮೊಳಗಿಸಲು ಮುಂದಾಗಿರುವ ಶಾ, ನಗರದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್‌ಕಮಿಟಿಯ ಸಭೆಯಲ್ಲಿ ಪಾಲ್ಗೊಂಡು, ಚುನಾವಣೆಯ ಗೆಲುವಿಗೆ ಅನುಸರಿಸಬೇಕಾದ ರಣತಂತ್ರಗಳ ಕುರಿತು ಪಕ್ಷದ ಪ್ರಮುಖರೊಂದಿಗೆ ಚರ್ಚಿಸಲಿದ್ದಾರೆ.ಅಲ್ಲದೆ ಜೊತೆಗೆ, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳ ಕ್ಲಸ್ಟರ್‌ಮಟ್ಟದ ಪ್ರಮುಖರೊಂದಿಗೆ ಸಭೆ ನಡೆಸಿ, ಲೋಕಸಭೆ ಚುನಾವಣೆಯ ಕುರಿತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಶನಿವಾರ ರಾತ್ರಿ 10.50ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರ ನಾಯಕರು ಹಾರ್ದಿಕವಾಗಿ ಸ್ವಾಗತ ಕೋರಿದರು. ಬಳಿಕ, ವಿಮಾನ ನಿಲ್ದಾಣದಿಂದ ನಗರದ ಬ್ಯಾಡಿಸನ್ ಬ್ ಲ್ಯೂ ಹೊಟೇಲ್ ಗೆ ಆಗಮಿಸಿದ ಶಾ, ಅಲ್ಲಿಯೇ ವಾಸ್ತವ್ಯ ಹೂಡಿದರು.
ಭಾನುವಾರ ಬೆಳಗ್ಗೆ 11 ಗಂಟೆಗೆ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ, ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ, ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ಶ್ರೀಮತಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಗೆಸ್ಟ್ ಹೌಸ್ ಉದ್ಘಾಟಿಸಲಿದ್ದಾರೆ.
ಬಳಿಕ ಮೈಸೂರಿಗೆ ಹಿಂದಿರುಗುವ ಅಮಿತ್ ಶಾ, ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ರ್ಆ.ಅಶೋಕ್, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಪಕ್ಷದ ಸಂಘಟನೆ ಬಲಗೊಳಿಸಲು ಅನುಸರಿಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯುವಸಾಧ್ಯತೆಯಿದೆ.
ಕೋರ್‌ಕಮಿಟಿ ಸಭೆ ಮುಗಿದ ಬಳಿಕ ಮಧ್ಯಾಹ್ನ 3.15ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ನಾಯಕರ ಸಭೆ ನಡೆಯಲಿದ್ದು,ತ ನಡೆಯಲಿದ್ದು,ಮೈಸೂರು, , ಕೊಡಗು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳ ಕ್ಲಸ್ಟರ್ ಮಟ್ಟದ ಪ್ರಮುಖರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಅನುಸರಿಬೇಕಾದ ರಣತಂತ್ರಗಳ ಕುರಿತು ಬಿಜೆಪಿ ನಾಯಕರಿಗೆ ಶಾ ಅವರು ಮಾರ್ಗದರ್ಶನ ನೀಡಲಿದ್ದಾರೆ.ಕೇಂದ್ರ ಗೃಹ ಸಚಿವರ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.