ಚಂಡೀಗಢ: ಚಂಡೀಗಢದ ಮೇಯರ್ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಹೊಸದಾಗಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅನ್ನು ಸಂಪರ್ಕಿಸಿದೆ. ಮೇಯರ್ ಸ್ಥಾನಕ್ಕೆ ಪಕ್ಷದ ಅಭ್ಯರ್ಥಿಯಾಗಿದ್ದ ಎಎಪಿ ಕೌನ್ಸಿಲರ್ ಕುಲದೀಪ್ ಕುಮಾರ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಚಂಡೀಗಢದ ಮೇಯರ್ ಸ್ಥಾನಕ್ಕೆ ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರತಿಪಕ್ಷಗಳ ಆಕ್ರೋಶದ ನಡುವೆ ಮಂಗಳವಾರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಬಿಜೆಪಿ 16 ಮತಗಳನ್ನು ಗಳಿಸಿ ಜಯಗಳಿಸಿತು. 36 ಮತಗಳಲ್ಲಿ ಎಂಟು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು.