ಬೆಂಗಳೂರು : ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್ (24) ಸಾವಿನ ಪ್ರಕರಣದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವರು ‘ ಇಂದು ಕಾಲುವೆಯಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ, ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ, ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯಲಿದೆ. ಎಲ್ಲಾ ಕಡೆ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಘಟನೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆ ಬಳಿಕ ಘಟನೆಯ ಸತ್ಯಾಂಶ ಬಯಲಾಗಲಿದೆ, ಪೊಲೀಸರು ಅಲರ್ಟ್ ಆಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಾರಿನಲ್ಲಿ ಇಬ್ಬರು ಚಲಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನ್ಯಾಮತಿ ಬಳಿ ಚಂದ್ರಶೇಖರ್ ಕಾರಿನಲ್ಲಿ ಇಬ್ಬರು ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್ ಜೊತೆ ಮತ್ತೊಬ್ಬರು ಪ್ರಯಾಣಿಸಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಕಾರಿನಲ್ಲಿ ಚಂದ್ರಶೇಖರ್ ಶವ ಮಾತ್ರ ಪತ್ತೆಯಾಗಿದೆ. ಇದರಿಂದ ಸಾಕಷ್ಟು ಶಂಕೆ ವ್ಯಕ್ತವಾಗಿದೆ. ಹೊನ್ನಾಳಿಯಿಂದ 5 ಕಿಮೀ ದೂರವಿರುವ ತುಂಗಾ ಕಾಲುವೆಯಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ.
ಚಂದ್ರಶೇಖರ್ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿಗೆ ಚಂದ್ರಶೇಖರ್ ಶವ ಹೇಗೆ ಬಂತು..ಇದು ಆತ್ಮಹತ್ಯೆಯೋ..ಕೊಲೆಯೋ ಎಂಬುದು ಗೊತ್ತಾಗಿಲ್ಲ. ಕಳೆದ ಐದು ದಿನಗಳಿಂದ ನಾಪತ್ತೆಯಾದ ಚಂದ್ರಶೇಖರ್ ಸಾವಿಗೆ ಕಾರಣವೇನು..? ಅವರಾಗಿಯೇ ಆತ್ಮಹತ್ಯೆ ಮಾಡಿಕೊಂಡರಾ..ಅಥವಾ ಯಾವುದಾದರೂ ವೈಷ,ಮ್ಯದ ಹಿನ್ನೆಲೆ ಚಂದ್ರಶೇಖರ್ ರನ್ನು ಕೊಲೆ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ. ಅದೇನೆ ಇರಲಿ ಪೊಲೀಸ್ ತನಿಖೆಯಿಂದಲೇ ಚಂದ್ರಶೇಖರ್ ಸಾವಿನ ರಹಸ್ಯ ಗೊತ್ತಾಗಬೇಕಿದೆ.