ದಾವಣಗೆರೆ : ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರನ ಸಾವಿನ ಬಗ್ಗೆ ಬಿಜೆಪಿ ( BJP) ಶಾಸಕ ಮಾಡಾಳು ವಿರೂಪಾಕ್ಷಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಘಟನೆ ಕುರಿತು ಕಳವಳ ವ್ಯಕ್ತಪಡಿಸಿದ ಶಾಸಕರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ಘಟನೆಯಿಂದ ಬಹಳ ಬೇಜಾರಾಗಿದೆ. ಇದು ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಹೇಳಿದ್ದಾರೆ. ಇದು ಆಕ್ಸಿಡೆಂಟ್ ಆಗೋಕೆ ಸಾಧ್ಯವಿಲ್ಲ, ಎಷ್ಟೇ ವೇಗವಾಗಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದರೂ ತುಂಗಾ ನಾಲೆಗೆ ಬೀಳುವುದಕ್ಕೆ ಚಾನ್ಸೇ ಇಲ್ಲ…ಚಂದ್ರುವನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನೂ, ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ, ಶಾಸಕ ರೇಣುಕಾಚಾರ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ತನಿಖೆ ಬಗ್ಗೆ ಚಂದ್ರಶೇಖರ್ ತಂದೆ ಅಭಿಪ್ರಾಯ ಪಡೆಯುತ್ತೇವೆ , ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರನ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಸಕರ ಸಹೋದರನ ಪುತ್ರ ಸಾವಿನ ಬಗ್ಗೆ ಕೆಲವು ಅನುಮಾನಗಳು ಕೇಳಿ ಬರ್ತಿವೆ ಎನ್ನುವ ಬಗ್ಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದ ತನಿಖೆ ನಡೆಯಲಿದೆ. ತನಿಖೆ ನಡೆಯದೆ ಏನೂ ಹೇಳೋಕೆ ಸಾಧ್ಯವಿಲ್ಲ. ರೇಣುಕಾಚಾರ್ಯ ನನ್ನಜೊತೆ ಸಂಪರ್ಕದಲ್ಲಿದ್ರು. ಅವರ ಜೊತೆ ನಾನು ಮಾತನಾಡ್ತಿದ್ದೆ ಎಂದರು.
ಶಾಸಕ ರೇಣುಕಾಚಾರ್ಯ ಚಂದ್ರಶೇಖರ್ ಕಿಡ್ನ್ಯಾಪ್ ಶಂಕೆಯನ್ನು ವ್ಯಕ್ತ ಪಡಿಸಿದ್ದರು. ಅದು ಖಚಿತ ಆಗಿಲ್ಲ, ತನಿಖೆಯಿಂದ ಗೊತ್ತಾಗಬೇಕು. ದಿನಕ್ಕೆ ಎರಡು ಮೂರು ಬಾರಿ ಫೋನ್ ಮಾಡ್ತಾ ಇದ್ರು. ಅಧಿಕಾರಿಗಳಿಗೆ ನಾನು ಸೂಚನೆ ಕೊಟ್ಟಿದ್ದೆ ಎಂದು ಹೇಳಿದರು.
ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ – ಬಿಜೆಪಿ ರಾಜ್ಯಧ್ಯಕ್ಷ ನಳಿನ್ಕುಮಾರ್ ಕಟೀಲ್
BREAKING NEWS : ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ