Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM

PoK ಶಾಲೆಗಳಲ್ಲಿ ‘JeM, LeT’ಯಿಂದ ಪುಟ್ಟ ಮಕ್ಕಳಿಗೆ ‘ಜಿಹಾದಿ’ ಟ್ರೈನಿಂಗ್, 7-13 ವರ್ಷ ವಯಸ್ಸಿನ ಮಕ್ಕಳ ನೇಮಕ : ವರದಿ

22/03/2026 4:23 PM

BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ

22/03/2026 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ
KARNATAKA

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

By kannadanewsnow0902/07/2025 7:21 PM

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು.

2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು.

ಬಿಜೆಪಿ ಹೋರಾಟಕ್ಕೆ ಜಯ

ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ ಎಂದರು.

ಆರ್‌ಎಸ್‌ಎಸ್‌ ನಿಷೇಧ ಮಾಡಿದರೆ, ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತನ್ನು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಬಗ್ಗೆ ಮಾತನಾಡುವಾಗ ಸ್ವಲ್ಪ ಅರಿವು ಇರಬೇಕು. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದರು.

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

Share. Facebook Twitter LinkedIn WhatsApp Email

Related Posts

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM1 Min Read

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM2 Mins Read

SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ

22/03/2026 4:00 PM1 Min Read
Recent News

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM

PoK ಶಾಲೆಗಳಲ್ಲಿ ‘JeM, LeT’ಯಿಂದ ಪುಟ್ಟ ಮಕ್ಕಳಿಗೆ ‘ಜಿಹಾದಿ’ ಟ್ರೈನಿಂಗ್, 7-13 ವರ್ಷ ವಯಸ್ಸಿನ ಮಕ್ಕಳ ನೇಮಕ : ವರದಿ

22/03/2026 4:23 PM

BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ

22/03/2026 4:20 PM

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM
State News
KARNATAKA

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

By kannadanewsnow0922/03/2026 4:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ವ್ಯಾಪ್ತಿಯ ಮಳ್ಳಕೊಪ್ಪ ಗ್ರಾಮದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಕಾಮಗಾರಿಯ ಸರ್ವೇ…

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM

SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ

22/03/2026 4:00 PM

ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

22/03/2026 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.