ಮಂಡ್ಯ : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗಿ ಸಂಕಷ್ಟ ಎದುರಾಗಿದ್ದು ಕಾನೂನಿನ ಮೂಲಕ ಅವರು ಹೋರಾಟ ನಡೆಸುತ್ತಿದ್ದಾರೆ ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಒಕ್ಕಲಿಗ ಸಮುದಾಯದವರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಕುಟುಂಬ ಮುಗಿಸಲು ಕಾಂಗ್ರೆಸ್ಸಿಗರು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್ ವಿರುದ್ಧ ಒಕ್ಕಲಿಗರು ಹೋರಾಟ ಮಾಡಲಿಲ್ಲ? ಆಗ ಒಕ್ಕಲಿಗತನ ಯಾಕೆ ಪ್ರದರ್ಶನ ಮಾಡಲಿಲ್ಲ? ಎಂದು ಪ್ರಶ್ನಿಸಿದರು.ಹಾಗಾಗಿ ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದರು.
ಈಗಾಗಲೇ ಕೆಲವರು ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದೇವೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಹಲೋ ಮಂಡ್ಯದಲ್ಲಿ ವಿರೋಧ ಪಕ್ಷದ ನಾಯಕ ಅರಶು ಹೇಳಿಕೆ ನೀಡಿದರು.
ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ, ಮುನಿರತ್ನ ವಿರುದ್ಧ ಎಫ್ ಎಸ್ ಎಲ್ ವರದಿ ಬಂದಮೇಲೆ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಎಫ್ ಎಲ್ ವರದಿಯಲ್ಲಿ ಒಂದುರಥ ಮಾಡಿರುವ ಕೃತ್ಯ ನಿಜವಾಗಿದ್ದರೆ ಸೂಕ್ತವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.