ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆಯಬೇಕಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಶೇ.33ರಷ್ಟು ಅಂಕಗಳನ್ನು ಆಯಾ ವಿಷಯ ಹಾಗೂ ಆಂತರೀಕ ಮೌಲ್ಯಮಾಪನ ಸೇರಿ ಪಡೆದರೂ ಉತ್ತೀರ್ಣರಾಗಲಿದ್ದಾರೆ.
SSLCಯಲ್ಲಿ ಇಷ್ಟು ಅಂಕ ಬಂದ್ರೆ ಪಾಸ್
ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಅಧಿಸೂಚನೆ ಸಂಖ್ಯೆ:ಇಪಿ 211 ಎಸ್‌ಎಲ್‌ಬಿ 2025, ದಿನಾಂಕ:24.07.2025 ರಲ್ಲಿ ಪಕಟಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಭಾಗ 4 (ಎ) ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗುವ, ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲು, ಕರ್ನಾಟಕ ರಾಜ್ಯಪತ್ರದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ:24.07.2025 ರಲ್ಲಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಸದರಿ ಕರಡು ನಿಯಮಗಳಿಗೆ ಸಾರ್ವಜನಿಕರಿಂದ ಆಕ್ಷೇಪಣೆ / ಸಲಹೆಗಳು ಸರ್ಕಾರದಲ್ಲಿ ಸ್ವೀಕೃತವಾಗಿರುತ್ತವೆ.
ಈಗ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸಿರುತ್ತದೆ. ಎಂದರೆ:-
ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ. ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.
2. ಅನುಬಂಧ ||| ರ ತಿದ್ದುಪಡಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ II ರಲ್ಲಿ-
(i) ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,
“16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಷ್ಟು ಅಂಕ ಬಂದ್ರೆ ಪಾಸ್
ಈ ಕುರಿತಂತೆ ಅಧೀನ ಕಾರ್ಯದರ್ಶಿ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಅದರಲ್ಲಿ 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ -1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (1) ಮತ್ತು ಸೆಕ್ಷನ್ 145 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಅಧಿಸೂಚನೆ ಸಂಖ್ಯೆ:ಇಪಿ 244 ಎಸ್‌ಎಲ್‌ಬಿ 2025, ದಿನಾಂಕ:24.07.2025 ರಲ್ಲಿ ಪ್ರಕಟಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಭಾಗ 4 (ಎ) ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗುವ, ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ.
ದಿನಾಂಕ:24.07.2025 ರಲ್ಲಿ ಕರ್ನಾಟಕ ರಾಜ್ಯಪತ್ರದಲ್ಲಿ ಪಕಟಿಸಿರುವ ಸದರಿ ಕರಡು ನಿಯಮಗಳಿಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ / ಸಲಹೆಗಳು ಸರ್ಕಾರದಲ್ಲಿ ಸ್ವೀಕೃತವಾಗದೇ ಇರುವುದರಿಂದ;
ಈಗ, ಕರ್ನಾಟಕ ಸರ್ಕಾರವು 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ -1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (1) ಮತ್ತು ಸೆಕ್ಷನ್ 145 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸಿರುತ್ತದೆ. ಎಂದರೆ:-
ನಿಯಮಗಳು
1. ಶೀರ್ಷಿಕೆ, ಪ್ರಾರಂಭ ಮತ್ತು ಅನ್ವಯಿಸುವಿಕೆ:- (1) ಈ ನಿಯಮಗಳನ್ನು ಕರ್ನಾಟಕ ಪದವಿ ಪೂರ್ವ ಪರೀಕ್ಷೆ (ಮೌಲ್ಯಮಾಪನ ವಿಧಾನ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಅಧಿಕೃತ ಗೆಜೆಟ್‌ನಲ್ಲಿ ಅವುಗಳ ಅಂತಿಮ ಪಕಟಣೆಯ ದಿನಾಂಕದಿಂದ ಅವು ಜಾರಿಗೆ ಬರುತ್ತವೆ.
(3) ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತವೆ.
2. ಕನಿಷ್ಠ ಉತ್ತೀರ್ಣ ಶೇಕಡಾವಾರು: ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಈ ಕೆಳಗಿನಂತೆ ನಿಯಂತ್ರಿಸಲಾಗುತ್ತದೆ, ಅವುಗಳೆಂದರೆ: –
(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಕ 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.
(ಬಿ) ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ:
ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
(ಸಿ) ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು:
ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
3. ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು:- ಪ್ರಾಯೋಗಿಕ ಅಂಶವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ
(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ 75% ಹಾಜರಾತಿಯನ್ನು ಹೊಂದಿದಲ್ಲಿ, ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ;
(ಬಿ) ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟ ಪಡಿಸಿದ ಕನಿಷ್ಠ ಸಂಖ್ಯೆಯ ಪ್ರಯೋಗಗಳನ್ನು ನಿರ್ವಹಿಸಿರಬೇಕು.
(ಸಿ) ಅಭ್ಯರ್ಥಿಯು ಪ್ರಾಯೋಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪುಯೋಗಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು ಮತ್ತು
(ಡಿ) ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು ಎಂದು ಅಧಿಕೃತ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು


BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ(DA) ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike
BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT








