ಉಡುಪಿ : ವಿದ್ಯುತ್ ದರ ಏರಿಕೆ ಕುರಿತಂತೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮಾವಳಿ ಚಿಂತನೆಗೆ ನಿರ್ಧರಿಸಿದ್ದೇವೆ ಎಂದಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್ 2014 ರಲ್ಲಿ ರೂಪಿಸಿದ ನಿಯಮಾವಳಿ ಮುಂದುವರಿಯುತ್ತಿದೆ, 3 ತಿಂಗಳಿಗೊಮ್ಮೆ ದರ ನಿಗದಿ ಮಾಡಲಾಗುತ್ತದೆ . ಹೊಸದೇನು ಇಲ್ಲ. ಈ ನಿಯಮಾವಳಿ ಬದಲಿಸಲು ನಿರ್ಧರಿಸಿದ್ದೇವೆ. ಈ ಬಗ್ಗೆ ಮರು ಚಿಂತನೆ ಮಾಡಲಿದ್ದೇವೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ವರ್ಷಕ್ಕೆ ಒಂದು ಸಲ ವಿದ್ಯುತ್ ದರ ಏರಿಕೆ ಮಾಡಲಾಗುತ್ತದೆ. 9 ವರ್ಷದಿಂದ 3 ತಿಂಗಳಿಗೊಮ್ಮೆ ದರ ನಿಗದಿ ಮಾಡಲಾಗುತ್ತದೆ. ಕಲ್ಲಿದ್ದಲು ಬೆಲೆ ಹೊಂದಾಣಿಕೆಗೊಸ್ಕರ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಇತ್ತೀಚೆಗೆ ಸಚಿವರು ಸ್ಪಷ್ಟನೆ ನೀಡಿದ್ದರು. ರಾಜ್ಯಾದ್ಯಂತ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 01ರಿಂದ ಪ್ರತಿ ಯುನಿಟ್ ವಿದ್ಯುತ್ಗೆ 24 ಪೈಸೆಯಿಂದ 43 ಪೈಸೆವರೆಗೆ ದರ ಹೆಚ್ಚಳವಾಗಿದ್ದು, ಮುಂದಿನ ವಿದ್ಯುತ್ ಬಿಲ್ನಲ್ಲಿ ಪರಿಷ್ಕೃತ ದರದ ಹೊರೆ ಗ್ರಾಹಕರ ಮೇಲೆ ಬೀಳಲಿದೆ.
Watch video: ಕುಡಿದ ಅಮಲಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಯುಪಿ ಶಿಕ್ಷಕ : ಗ್ರಾಮಸ್ಥರಿಂದ ಆಕ್ರೋಶ
ವಿದ್ಯಾರ್ಥಿ ವೇತನದ ಕುರಿತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship 2022-23