ಮೈಸೂರು : ಚನ್ನಗಿರಿಯ ಠಾಣೆಯಲ್ಲಿ ನಡೆದ ಸಾವು ಪ್ರಕರಣಕ್ಕೆ ಸಂಬಂಧಿಸದಂತೆ ಇದು ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಇನ್ನು ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆ ಕುರಿತು ಮಾತನಾಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೇ ಕಾಲ ಕಳೆಯುವುದನ್ನು ಬಿಡಬೇಕು ಎಂದು ತಿರುಗೇಟು ನೀಡಿದರು.
ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.a