ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ. ಇಂತಹ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.
ನಂತ್ರ ಮಾತನಾಡಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿ, ಜೊತೆಗೆ ಕಾರ್ಯಕರ್ತರ ಸಭೆಯ ಬಳಿಕ ಅವರ ಒತ್ತಡದ ಕಾರಣದಿಂದಾಗಿ ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದರು.
ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಉಮೇಧುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
BREAKING: ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಾಲಾ ಮಕ್ಕಳಿಗೆ ಗಂಭೀರ ಗಾಯ
BIGG NEWS: ‘BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ