ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುತ್ತೇನೆ ಎಂದು ಹೇಳಿದ್ದ ಸಿಪಿ ಯೋಗೇಶ್ವರ್ ಇದೀಗ ಉಲ್ಟಾ ಹೊಡೆದಿದ್ದು, NDA ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ” ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಹೌದು ಈ ಕುರಿತು ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು,ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ನನ್ನ ಪರವಾಗಿ ಮಾತನಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದು, ಅವರೂ ಸಹ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ನೋಡಿಕೊಂಡು ಬರುವ ಸೋಮವಾರ ಮೈತ್ರಿ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದೇನೆ ಎಂದು ತಿಳಿಸಿದರು.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚಿಗೆ ಚನ್ನಪಟ್ಟಣ ಬೈ ಎಲೆಕ್ಷನ್ ಗೆ ಕಾಂಗ್ರೆಸ್ ನಿಂದ ನಾನೆ ಅಭ್ಯರ್ಥಿ ಎಂದು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೊಂದೆಡೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಸೋತಿದ್ದು, ಈ ಚುನಾವಣೆ ಡಿಕೆ ಶಿವಕುಮಾರ್ ಗೆ ಪ್ರತಿಷ್ಠೆಯ ಕಣವಾಗಿದೆ.