Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣ ಉಪ ಚುನಾವಣೆ; ಬಿಜೆಪಿ ಜೊತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್-HDK
KARNATAKA

ಚನ್ನಪಟ್ಟಣ ಉಪ ಚುನಾವಣೆ; ಬಿಜೆಪಿ ಜೊತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್-HDK

By ವಸಂತ ಬಿ ಈಶ್ವರಗೆರೆ

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿಅಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು. 2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

ನಿಖಿಲ್ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಇದೆ:

ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು; ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋದಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು. ನಿಖಿಲ್ ಮಂಡ್ಯದಲ್ಲಿ ‌ನಿಲ್ಲಿಸಿದಾಗ ಎಲ್ಲಾ ‌ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಅವರು ಹೇಳಿದರು.

ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಅವರು ಹೇಳಿದರು.

ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪದೇ ಪದೆ ಭೇಟಿಯಿಂದ ಫಲ ಸಿಗಲ್ಲ:

ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದು ಸಚಿವರು ಹೇಳಿದರು.

BIG NEWS: BJP ಭಯೋತ್ಪಾದಕರ ಪಕ್ಷ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗು

ಜೈಲಿನಲ್ಲಿ ರಾಮಾಯಣ ನಾಟಕ: ಸೀತೆಯನ್ನು ಹುಡುಕಲು ಹೋದ ಇಬ್ಬರು ಕೈದಿಗಳು ಪರಾರಿ

Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.