ರಾಮನಗರ : ಚನ್ನಪಟ್ಟಣದ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಹೇಳಿಕೆ ಒಂದನ್ನು ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ವೋಟ್ ಹಾಕಿ ಎಂದು ಜನರಲ್ಲಿ ಮನವಿ ಮಾಡಿದರು.
ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾಗಿರಲಿ ಅವರಿಗೆ ನನ್ನ ಮುಖ ನೋಡಿ ಮತ ಹಾಕಿ. ಕಾಂಗ್ರೆಸ್ ಅಭ್ಯರ್ಥಿ ಯಾರೇ ಇದ್ದರೂ ನನ್ನ ಮುಖ ನೋಡಿ ಮತ ಹಾಕಿ ಎಂದು ಡಿಕೆ ಶಿವಕುಮಾರ್ ಜನರಲ್ಲಿ ಮನವಿ ಮಾಡಿದರು.
ಇದೆ ವೇಳೆ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಸ್ತಾಪಿಸಿ ನೀವು ಉಚಿತವಾಗಿ ಬಸ್ ಕೊಟ್ಟಿದ್ದರಿಂದ ನಮ್ಮ ಮೆಟ್ರೋಗೆ ಜನಾನೇ ಬರುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದರು. ರಾಮನಗರದಲ್ಲಿ ಉಚಿತವಾಗಿ ವಿದ್ಯುತ್ ಎರಡು ಸಾವಿರ ರೂಪಾಯಿ ಮನೆಯೊಡತಿಗೆ ತಲುಪುತ್ತವೆ ಎಂದು ತಿಳಿಸಿದರು.