ಬೆಂಗಳೂರು: ರಾಜ್ಯ ಸರ್ಕಾರದಿಂದ ಚಾರ್ ಧಾಮ ಹಾಗೂ ಮಾನಸ ಸರೋವರ ಯಾತ್ರೆ ಕೈಗೊಳ್ಳುವಂತ, ಕೈಗೊಂಡು ಬಂದಿರುವಂತ ಯಾತ್ರಾರ್ಥಿಗಳಿಗೆ ಸಹಾಯಧನ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.
ಈ ಬಗ್ಗೆ ಮುಜುರಾಯಿ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. 2021-22 ಹಾಗೂ 2022-23ನೇ ಸಾಲಿನಲ್ಲಿ ಯಾತ್ರೆ ಕೈಗೊಂಡವರಿಂದ ಯಾತ್ರೆ ಕೈಗೊಂಡವರು ಅರ್ಜಿಗಳನ್ನು ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ.
ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ಚಾರ್ ಧಾಮ, ಮಾನಸ ಸರೋವರ ಯಾತ್ರಾರ್ಥಿಗಳಿಗೆ ಸಹಾಯಧನ ಸೌಲಭ್ಯವನ್ನು ನೀಡುವಂತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ.
ಅಂದಹಾಗೇ ಚಾರ್ ಧಾಮ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ ಸಹಾಯ ಧನ ನೀಡಿದರೇ, ಮಾನಸ ಸರೋವರಕ್ಕೆ ಹೋಗಿ ಬಂದವರಿಗೆ ತಲಾ 30 ಸಾವಿರ ರೂ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಗಾಗಿ ಅರ್ಜಿ ಸಲ್ಲಿಸಲು 40 ವರ್ಷ ಮೇಲ್ಪಟ್ಟವರಾಗಿರಬೇಕು. ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
ಮಾದಪ್ಪನ ಹಾಡನ್ನು ಕೆಟ್ಟದಾಗಿ ಬಿಂಬಿಸಿದಾಗ ಎಲ್ಲಿಗೆ ಹೋಗಿತ್ತು ನಿಮ್ಮ ಬುದ್ದಿ ನಟ ರಿಷಬ್ ಶೆಟ್ಟಿ ಜನತೆ ಪ್ರಶ್ನೆ
ಸಹಾಯ ಧನ ಸೌಲಭ್ಯವನ್ನು ಪಡೆಯಲು ಅರ್ಹರು http://karnemaka.kar.nic.in/yatrabenefit ಜಾಲತಾಣದ ಮೂಲಕ ಆನ್ ಲೈನ್ ನಲ್ಲಿ ಡಿಸೆಂಬರ್ 31ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.