ಧಾರವಾಡ: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪವು ಸಾಭೀತಾದ ಹಿನ್ನಲೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆಯಲ್ಲದೇ 1 ಲಕ್ಷ ದಂಡವನ್ನು ವಿಧಿಸಿ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದಂತ ಆರೋಪದಡಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಅಂದಾನಗೌಡ ಪಾಟೀಲ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರಿಗೆ ಸಂಬಂಧಿಸಿದಂತ 51,72,003 ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಆಗಸ್ಟ್.6, 2014ರಂದು ತುಂಗಾ ಮೇಲ್ದಂಡೆಯ ಸಿಇ ಅಂದಾನಗೌಡ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ಕೆ.ಪರಶುರಾಮ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು. ಇದೇ ಪ್ರಕರಣದಲ್ಲಿ ಕೋರ್ಟ್ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದು ಸಾಭೀತಾದ ಹಿನ್ನಲೆಯಲ್ಲಿ ನಾಲ್ಕು ವರ್ಷ ಜೈಲು, 1 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದೆ.
ರಿಲಯನ್ಸ್ ಫೌಂಡೇಶನ್‌ನಿಂದ ‘ಎನ್‌ಎಬಿ’ಗೆ 5 ಕೋಟಿ ನೆರವು ನೀಡಿದ ನೀತಾ ಅಂಬಾನಿ








