ಬೆಂಗಳೂರು: ನಾಳೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ರೂಪಿಸಿದವರ ವಿರುದ್ಧ ತನಿಖೆ ನಡೆಸುತ್ತಿರುವಂತ ವಿಶೇಷ ತನಿಖಾ ತಂಡ(SIT) ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ನಾಳೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.
ತನಿಖಾಧಿಕಾರಿ ಜೀತೇಂದ್ರ ದಯಾಮಾ ಅವರು ಬರೋಬ್ಬರಿ 4,000 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಚಿನ್ನಯ್ಯನನ್ನು ಬಂಧನ ಮಾಡಲಾಗಿದ್ದು, ಉಳಿದವರ ವಿಚಾರಣೆ ನಡೆಸಲಾಗಿತ್ತು. ಇನ್ನೂ ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡಿರುವು ದೋಷಾರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಎಸ್ಐಟಿ ತಯಾರಿ ನಡೆಸಿದೆ.
ಶಿವಮೊಗ್ಗ: ಸಾಗರ ತಾಲ್ಲೂಕು KUWJ ಸಂಘದ ‘ಅಧ್ಯಕ್ಷರಾಗಿ ಮಹೇಶ್ ಹೆಗಡೆ’ ಅವಿರೋಧವಾಗಿ ಆಯ್ಕೆ
ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್
BREAKING: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ








