ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಸಹಿತ ಗಾಳಿಯಿಂದಾಗಿ ಚಾರ್ಮಡಿ ಘಾಟ್ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಈ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಸಂಚಾರ ಬಂದ್ ಆಗಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವಂತ ಹೆದ್ದಾರಿಯಲ್ಲಿ 173 ರಾಷ್ಟ್ರೀಯ ಹೆದ್ದಾರಿ ಕೂಡ ಒಂದು. ಈ ಮಾರ್ಗದ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಗಾತ್ರದ ಮರ ಮುರಿದು ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಇದೀಗ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದಾವೆ. ಈ ಹಿನ್ನಲೆಯಲ್ಲಿ ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಅಲ್ಲದೇ ಚಾರ್ಮಾಡಿ ಘಾಟ್ ರಸ್ತೆ ಮೂಲಕ ತೆರಳದಂತೆ ಬ್ಯಾರಿಕೇಡ್ ಹಾಕಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ.
ಮೂಡಾ ಭೂಮಿಯನ್ನು ಸಿಎಂ ಕುಟುಂಬ ಮುಕ್ಕಿ ತಿಂದಿದೆ: ಸಿದ್ದಾಲಜಿ ಸಕಲ ಗುಣ ನನಗೆ ಚೆನ್ನಾಗಿ ಗೊತ್ತು-HDK
BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು