ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಾಮರಾಜನಗರ ತಾಲೂಕಿನ ವಿ.ಸಿ ಹೊಸೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಜಮೀನಿನಲ್ಲಿ ಜಡೆಸ್ವಾಮಿ ಮತ್ತು ಅರ್ಚಕ ಶಿವಮಲ್ಲಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದೆ.
ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ಜಮೀನಿಗೆ ತೆರಳಲು ಗ್ರಾಮಸ್ಥರಲ್ಲಿ ಭಯ ಮನೆ ಮಾಡಿದ್ದು ಘಟನಾ ಸ್ಥಳಕ್ಕೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿಗಳು ಆಗಮಿಸಿದ್ದಾರೆ. ಸದ್ಯ ಬೊನ್ ಇಟ್ಟು ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.








