ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲೇ ಆದಿಲ್ ಎಂಬಾತನ ಲಾಕಪ್ ಡೆತ್ ಆಗಿತ್ತು. ಇದು ಪೊಲೀಸರೇ ನಡೆಸಿದಂತ ಕೃತ್ಯ ಎಂಬುದಾಗಿ ಸಿಡಿದೆದ್ದಿದ್ದಂತ ಜನರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆದ್ರೇ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಸಂಬಂಧ ಮೃತ ಆದಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ವರದಿ ಪೊಲೀಸರ ಕೈಸೇರಿದೆ. ಅದರಲ್ಲಿ ಆದಿಲ್ ಲೋಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಕಾರ್ಡಿಯಾ ಫಲ್ಮನರಿ ಎಂದು ಉಲ್ಲೇಖಿಸಲಾಗಿದೆ. ಈ ವರದಿಯನ್ನು ಸಿಐಡಿ ಅಧಿಕಾರಿಗಳಿಗೆ ಪೊಲೀಸರು ಸಲ್ಲಿಸಿದ್ದಾರೆ.
ಅಂದಹಾಗೇ ಮೇ.24ರಂದು ಪೊಲೀಸರ ಕಸ್ಟಡಿಯಲ್ಲಿ ಇದ್ದಾಗಲೇ ಆದಿಲ್ ಮೃತಪಟ್ಟಿದ್ದನು. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಂತ ಲಾಕಪ್ ಡೆತ್ ಎಂಬುದಾಗೇ ಹೇಳಲಾಗುತ್ತಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
Shocking News: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ