ಮುಂಬೈ: ಚೆನ್ನೈನಿಂದ 172 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶನಿವಾರ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ ಎರಡನೇ ಪ್ರಕರಣ ಇದಾಗಿದೆ. ಮೇ 28ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು.
6ಇ-5314 ವಿಮಾನವು ಬೆಳಿಗ್ಗೆ 8.45ಕ್ಕೆ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ.