Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಡಿನ ಸಮಸ್ತ ಜನತೆಗೆ ’76ನೇ ಗಣರಾಜ್ಯೋತ್ಸವದ’ ಶುಭಾಶಯ ಕೋರಿದ CM ಸಿದ್ದರಾಮಯ್ಯ
KARNATAKA

BIG NEWS : ನಾಡಿನ ಸಮಸ್ತ ಜನತೆಗೆ ’76ನೇ ಗಣರಾಜ್ಯೋತ್ಸವದ’ ಶುಭಾಶಯ ಕೋರಿದ CM ಸಿದ್ದರಾಮಯ್ಯ

By ಸುರೇಶ್‌

ಬೆಂಗಳೂರು : ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಟ್ವೀಟ್ ನಲ್ಲಿ ಶುಭ ಕೋರಿದ ಅವರು, ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ. ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ಥಂಭಗಳು ದುರ್ಬಲಗೊಂಡು ಶಕ್ತಿಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ. ಇಂತಹದ್ದೊಂದು ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ದೊಡ್ಡ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೆಗಲ ಮೇಲಿದೆ.

ಜಾತಿ, ಮತ, ಪಂಥ, ಪ್ರದೇಶದ ಭೇದಗಳನ್ನು ಮರೆತು ಇಡೀ ದೇಶ ಒಂದಾಗಿ ಹೊರಗಿನ ಶತ್ರುಗಳನ್ನು ಹೊಡೆದೋಡಿಸಲು ಹೇಗೆ ಸ್ವಾತಂತ್ರ್ಯಹೋರಾಟ ನಡೆಸಲಾಯಿತೋ, ಅಂತಹದ್ದೇ ಒಂದು ಹೋರಾಟವನ್ನು ದೇಶದೊಳಗಿನ ಸಂವಿಧಾನ ವಿರೋಧಿ ಶತ್ರುಗಳ ವಿರುದ್ಧ ನಡೆಸಬೇಕಾಗಿದೆ. ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯದೆ ಹೋದರೆ ಮುಂದಿನ ಪೀಳಿಗೆಗೆ ಬದುಕುಳಿಯಲು ಪ್ರಜಾಪ್ರಭುತ್ವ ಇರುವುದಿಲ್ಲ.

ಇದೊಂದು ಜೀವನ್ಮರಣದ ಪ್ರಶ್ನೆಯಾಗಿದ್ದು, ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಒಗ್ಗೂಡಿ ದೃಢಚಿತ್ತದಿಂದ ಸಂವಿಧಾನವನ್ನು ಉಳಿಸುವ ಸಂಕಲ್ಪ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮೂಲಕ ನಮ್ಮ ಭಾರತವನ್ನು ರಕ್ಷಿಸುವ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಚಿಂತನೆಗಳು.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ನಮ್ಮ ಕಾಂಗ್ರೆಸ್ ಪಕ್ಷ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ನಾಡ ಬಾಂಧವರೆಲ್ಲರೂ ಪಕ್ಷ, ಪಂಥ, ಜಾತಿ-ಧರ್ಮಗಳ ಎಲ್ಲೆಯನ್ನು ಮೀರಿ ಈ ಅಭಿಯಾನದಲ್ಲಿ ಕೈ ಜೋಡಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೊಮ್ಮೆ ನಾಡಬಾಂಧವರಿಗೆಲ್ಲ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್.. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂದು ಶುಭಾಶಯಗಳು ಕೋರಿದರು.

ನಾಡಿನ ಸಮಸ್ತ ಬಂಧುಗಳಿಗೆ 76ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ.

ಇದು ಗತವೈಭವದಲ್ಲಿ… pic.twitter.com/0qZGsQS5Zc

— Siddaramaiah (@siddaramaiah) January 26, 2025

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

2 Mins Read

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

2 Mins Read

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

1 Min Read
Recent News

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | UG-CET Result 2026

State News
KARNATAKA

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

By kannadanewsnow57 KARNATAKA 2 Mins Read

ಬೆಂಗಳೂರು: ಸಾವಿರಾರು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UGCET/K-CET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ…

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | UG-CET Result 2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.