Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
KARNATAKA

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

By kannadanewsnow0924/04/2025 2:31 PM

ಚಾಮರಾಜನಗರ : ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ

ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು.

ಬಂದೋಬಸ್ತು ಸಡಿಲಗೊಳಿಸಬಾರದಿತ್ತು

ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.

ಉಗ್ರರನ್ನು ಹಾಕಲು ಎಲ್ಲ ಸಹಕಾರ

ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು.ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು.ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಪಕ್ಷ ಕೊಡುತ್ತದೆ ಎಂದರು.

10 ಲಕ್ಷ ಪರಿಹಾರ

ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೋ ಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

ಕಾದು ನೋಡಿ

ಬಜೆಟ್ ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಮಾತನಾಡುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ರಾಜಕೀಯ ದ್ವೇಷ

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ ,ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24 ರಲ್ಲಿ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿ ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದರು.

ಚಾಮರಾಜನಗರ ಜಿಲ್ಲೆಯ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.

BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ : ಪಹಲ್ಗಾಮ್ ನಲ್ಲಿ ಮೃತಟ್ಟವರಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಕೆ.!

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.