ಬೆಂಗಳೂರು ; ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗಧಿಯಾಗಿದ್ದು, ರಾಜ್ಯದಲ್ಲಿ ಸಿಎಎ ಜಾರಿ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.
ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಎ ಜಾರಿ ಸೇರಿದಂತೆ ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
ಇನ್ನು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರಗಾಲ, ವಿವಿಧ ಕಾಮಗಾರಿ ಯೋಜನೆಗಳಿಗೆ ಅನುಮೋದನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಮತೆ ಹಲವು ಸಚಿವರು ಶಾಸಕರು ಭಾಗಿಯಾಗಲಿದ್ದಾರೆ.