ಬೆಂಗಳೂರು: ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸ್ಸಿನಂತೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ವೇತನ ಜಾರಿ ಸಂಬಂಧ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಜುಲೈ.22ರಂದು ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 22-07-2024ರಂದು ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 13ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ.
ಜುಲೈ.22ರಂದು ನಡೆಯುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಯೋಜನೆಗಳಿಗೆ ಅನುದಾನ ಒದಗಿಸೋದಕ್ಕೆ ಅನುಮೋದನೆ ನೀಡುವುದಲ್ಲೇ, ಹಲವು ಜನಪರ ಅಭಿವೃದ್ಧಿ ಕಾರ್ಯಗಳಿಗೆ ನಿರ್ಣಯದ ಅಂಗೀಕಾರ ನೀಡುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ.
BREAKING: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka 2nd PUC Result
BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!