Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಚುನಾವಣಾ ಬಾಂಡ್’ ರದ್ದು : ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

‘ಚುನಾವಣಾ ಬಾಂಡ್’ ರದ್ದು : ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0516/02/2024 8:47 AM

ಬೆಂಗಳೂರು : ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ನಿನ್ನೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ತೀರ್ಪನ್ನು ಸ್ವಾಗತಿಸಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ.ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತಂದಿದ್ದು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿದೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ.

ಚುನಾವಣಾ ಬಾಂಡ್‌ಗಳು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಬಿಜೆಪಿ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ.

ಈಗಾಗಲೇ ಚುನಾವಣಾ ಬಾಂಡ್ ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗ ಪಡಿಸಬೇಕೆಂದು ಹೇಳಿದೆ. ಇದರಿಂದ ಬಿಜೆಪಿ ಪಕ್ಷದ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್ ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು.

ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.
ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ @narendramodi ಸರ್ಕಾರ ಜಾರಿಗೆ ತಂದಿದ್ದ ಈ…

— CM of Karnataka (@CMofKarnataka) February 15, 2024

X ನಲ್ಲಿ ಭಯೋತ್ಪಾದಕ ಗುಂಪುಗಳಿಗೆ ‘ಬ್ಲೂ ಟಿಕ್‌ಗಳನ್ನು’ ಖರೀದಿಸಲು ಅನುಮತಿ : ಮಾಹಿತಿ ಬಹಿರಂಗ

ಕೆಎಸ್‌ಆರ್‌ಟಿಸಿಗು ಬಂತು ‘ಡಿಜಿಟಲ್ ಪೇಮೆಂಟ್’ ಸಿಸ್ಟಮ್ : 10 ಸಾವಿರ ಮಷಿನ್ ಗಳಿಗೆ ಟೆಂಡರ್

 

Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.