Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
KARNATAKA

ಇಂದು 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

By kannadanewsnow57

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆಯಲ್ಲಿ ಅವರು, 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್.ಎಸ್.ಎಲ್.ಸಿ. ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲಾ ವೃತ್ತದಿಂದ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಸದ್ಯಕ್ಕೆ ನೇಮಕಾತಿ ಪತ್ರ ನೀಡಲಾಗುತ್ತಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ:

ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ 25 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರತಿವರ್ಷ ಗುರುತಿಸಿ 2017ರಿಂದ ಮುಖ್ಯಮಂತ್ರಿಗಳ ಪದಕ ನೀಡಲಾಗುತ್ತಿದ್ದು, 2022 ಮತ್ತು 2023ನೇ ಸಾಲಿನಲ್ಲಿ ಒಟ್ಟು 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Chief Minister's Medal to be presented to 49 forest department officials staff for appointment letters to 267 forest watchers today ಇಂದು 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.