ಬೆಳಗಾವಿ: ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಪ್ರಕಾಶ್ ರಾಥೋಡ್ ಅವರ ತಾಯಿ ಶ್ರೀಮತಿ ಆಶಾದೇವಿ ರಾಥೋಡ್ ಅವರ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಶ್ರೀಮತಿ ಆಶಾದೇವಿ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ಅವರು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ.ಟಿ ರಾಥೋಡ್ ಅವರ ಧರ್ಮಪತ್ನಿಯಾಗಿದ್ದು, ಅವರ ಕುಟುಂಬಕ್ಕೆ ಸಂತಾಪ ತಿಳಿಸಲು ಬಯಸುತ್ತೇನೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕುಟುಂಬ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದರು.
ಶಿವಮೊಗ್ಗ: ನಾಳೆ ಸಾಗರ ತಾಲೂಕು ಸಾಹಿತ್ಯ ಸಮ್ಮೇಳನ, ಒಂದು ದಿನ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯ ಮಂಜೂರು