ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಧಾರುಣ ಘಟನೆ ಎನ್ನುವಂತೆ ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗುವೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ ಮಗುವಿನ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿಯಲ್ಲಿ ಇಂದು ಮನೆಯ ಮುಂದೆ ಇದ್ದಂತ ತೆಂಗಿನ ಮರ ಮುರಿದು ಬಿದ್ದ ಪರಿಣಾಮ, ಪೃಥ್ವಿರಾಜ್(3) ಎಂಬ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನೂ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯವಾಗಿದೆ. ಅವರನ್ನು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಹದಿನೈದು ದಿನಗಳ ಹಿಂದಷ್ಟೇ 3 ವರ್ಷದ ಮಗ ಪೃಥ್ವಿಯನ್ನು ಕರೆದುಕೊಂಡು ತವರು ಮನೆ ಹಾಲಗಾನಹಳ್ಳಿಗೆ ಹೆರಿಗೆಗಾಗಿ ಮೋನಿಕಾ ಆಗಮಿಸಿದ್ದರು. ಮನೆಯ ಮುಂದಿನ ತೆಂಗಿನ ಮರ ಮುರಿದು ಬಿದ್ದ ಪರಿಣಾಮ, ಈ ಧಾರುಣ ಘಟನೆ ನೆಡೆದಿದೆ.
SESP, TSP ಯೋಜನೆ ಹಣ ಬೇರೆ ಯೋಜನೆಗಳಿಗೆ ಬಳಸದಂತೆ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war