ಚಿಕ್ಕಬಳ್ಳಾಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ದರೋಡೆ ಘಟನೆಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಅಂಗಡಿಗೆ ಖರೀದಿಗೆ ಎಂದು ನೆಪದಲ್ಲಿ ಬಂದಂತಹ ಇಬ್ಬರು ಖದೀಮರು ಹಾಡ ಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ಹಾಡಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ. ಅಂಗಡಿಗೆ ಖರೀದಿ ನೆಪದಲ್ಲಿ ಬಂದಿದ್ದ ಇಬ್ಬರಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಮಾಂಗಲ್ಯಸರ ಕಸಿದು ಪರಾರಿಯಾಗಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಸರಗಳ್ಳತನ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.