ಚಿಕ್ಕಬಳ್ಳಾಪುರ : ಆತನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳಿದ್ದರೂ ಆದರೂ ಇನ್ನೊಂದು ಮದುವೆಯಾಗಿದ್ದನು.ಆದರೆ ಎರಡನೇ ಪತ್ನಿಯ ಜೊತೆಗೆ ಕ್ಷುಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದ ಆತ ಆಕೆಯನ್ನು ಭೀಕರವಾಗಿ ಕೊಲೆಗೈದು ಆಮೇಲೆ ತಾನಾಗೇ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಪತಿಯನ್ನು ಹರೀಶ್ ಎಂದು ಹೇಳಲಾಗುತ್ತಿದ್ದು, ರೆಡ್ಡಿಲಕ್ಷ್ಮಿ(30) ಮೃತ ರ್ದುದೈವಿ. ಆಂಧ್ರ ಪ್ರದೇಶ ಮೂಲದವರಾಗಿದ್ದ ದಂಪತಿ, ಒಂದು ವರ್ಷದ ಹಿಂದೆ ಸಾರ್ವಜನಿಕರ ಸಮ್ಮೂಖದಲ್ಲಿ ಅದ್ದೂರಿ ವಿವಾಹ ಮಾಡಿಕೊಂಡು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಹರೀಶ್ ಹೋಸಕೋಟೆಯಲ್ಲಿ ಹೂ ವ್ಯಾಪಾರಿಯಾಗಿದ್ರೆ, ರೆಡ್ಡಿಲಕ್ಷ್ಮಿ ಮನೆಯಲ್ಲಿ ಇದ್ದಳು. ಆದ್ರೆ, ಈಗ ಸ್ವತಃ ಹರೀಶ್ ಪತ್ನಿಯನ್ನು ಬರ್ಬರವಾಗಿ ಕೊಂದು ಹೊಸಕೋಟೆ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.
ಹತ್ತು ವರ್ಷಗಳ ಹಿಂದೆ ಹರೀಶ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಮಮತಾ ಎಂಬುವವರ ಜೊತೆ ಮದುವೆಯಾಗಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇತ್ತ ವಿವಾತೆಯಾಗಿದ್ದ ರೆಡ್ಡಿಲಕ್ಷ್ಮಿ ಪತಿಯಿಂದ ವಿಚ್ಚೇದನ ಪಡೆದು, ಹರೀಶ್ನನ್ನು ಎರಡನೆ ಮದುವೆಯಾಗಿದ್ದಳು. ಆದ್ರೆ, ಹರೀಶ್ ಮದುವೆಯಾಗಿರುವ ವಿಚಾರ ತಿಳಿಸಿರಲಿಲ್ಲ.
ಇದೇ ವಿಚಾರವಾಗಿ ನಿನ್ನೆ ಇಬ್ಬರ ನಡುವೆ ಜಗಳ ನಡೆದಿದೆ ಜಗಳ ವಿಕೋಪಕ್ಕೆ ತಿರುಗಿ ಹರೀಶ್ ಪತ್ನಿಯನ್ನು ಉಸಿರುಗಟ್ಟಿಸಿದ್ದಾನೆ ಈ ವೇಳೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ನಂತರ ಮೊದಲನೇ ಪತ್ನಿಯ ಬಳಿ ಹೋಗಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ನಂತರ ಮೊದಲನೇ ಪತಿ ಗಂಡನನ್ನು ಪೊಲೀಸರಿಗೆ ತಂದು ಒಪ್ಪಿಸಿದ್ದಾಳೆ.ಚಿಂತಾಮಣಿ ನಗರ ಠಾಣೆ ಪೊಲೀಸರು ಆರೋಪಿ ಹರೀಶ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಎರಡನೆ ಪತ್ನಿ ಇದ್ರೆ ಮೊದಲನೆ ಪತ್ನಿಯ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಕೋಪದಲ್ಲಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.