ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರೆದಲ್ಲಿ ಘೋರ ಘಟನೆ ಒಂದು ನಡೆದಿದ್ದು, ನವವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದೆ. ಮೃತಳನ್ನು ರೂಪ ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜೊತೆ ಮದುವೆಯಾಗಿದ್ದ ರೂಪ, ಪತಿಯ ಅನುಮಾನದ ಭೂತಕ್ಕೆ ರೂಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೂಪ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಮೃತ ರೂಪ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ರೂಪ ಪೋಷಕರಿಂದ ಗಂಡ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.








