ಚಿಕ್ಕಬಳ್ಳಾಪುರ : ಜಮೀನು ವಿವಾದದ ಹಿನ್ನೆಲೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ದುಷ್ಕರ್ಮಿಗಳು, ಗ್ರಾಮದ ಗಂಗಮ್ಮಗೆ ಸೇರಿದ ತೋಟದಲ್ಲಿ ಈ ಒಂದು ಕೃತ್ಯ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಗ್ರಾಮದಲ್ಲಿ ಗಂಗಮ್ಮ ಎಂಬುವರಿಗೆ ಸೇರಿದ ತೋಟದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಡಿಕೆ ಮರಗಳನ್ನು ಬೆಳೆದಿದ್ದರು.
ಜಮೀನು ವಿವಾದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಅಡಕೆ ಮರಗಳನ್ನು ನಾಶ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಹಶೀಲ್ದಾರ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಕ್ಕೆ ಈ ಒಂದು ಕೃತ್ಯ ಎಸಗಲಾಗಿದೆ ಎನ್ನಲಾಗಿದ್ದು, ಘಟನೆ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.