ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿಗೆ ಥಳಿಸಿರುವ ಘಟನೆ ವರದಿಯಾಗಿದ್ದು, ಈ ಹಿನ್ನೆಲೆ ಮಕ್ಕಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಶಾಲೆಗೆ ಭೇಟಿ ನೀಡಿ 5 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಮಕ್ಕಳ ರಕ್ಷಣಾ ಆಯೋಗ ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿತ್ತು. 8ನೇ ತರಗತಿ ವಿದ್ಯಾರ್ಥಿ ಸುಶಾಂತ್ ಗೆ ಶಿಕ್ಷಕರು ಥಳಿಸಿರುವ ಆರೋಪ ಕೇಳಿ ಬಂದಿದೆ. ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಇದೀಗ ಅಕ್ರೋಶ ಹೊರಹಾಕಿದ್ದಾರೆ.








