ಚಿಕ್ಕಬಳ್ಳಾಪುರ : ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂತ್ರಾಲಯದಿಂದ ವಾಪಸ್ ಬರುವ ವೇಳೆ ಈ ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಇನೋವಾ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಹಾಗಾಗಿ ಸ್ಥಳದಲ್ಲೇ ನಂದಿನಿ (35) ಎನ್ನುವ ಮಹಿಳೆ ಸಾವನಪ್ಪಿದ್ದರೆ, ಕಾಲಿನಲ್ಲಿದ್ದ ಉಳಿದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.