ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಕೆಪಿಸಿಸಿ ಕಾರ್ಯದರ್ಶಿ ಎಸ್.ಎಂ ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ.ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಎಸ್ಎಂ ಜಗದೀಶ್, ಕಾರ್ಯದರ್ಶಿ, ಪ್ರದೇಶ ಯುವ ಕಾಂಗ್ರೆಸ್ ಅವರನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಅನ್ಯ ಪಕ್ಷದ ಅಭ್ಯರ್ಥಿಯೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವುದು ತಿಳಿದು ಬಂದಿದೆ ಎಂದಿದ್ದಾರೆ.
ಪಕ್ಷದ ನಾಯಕರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಮಾತನಾಡುತ್ತಿರುವುದು ಕಂಡು ಬಂದಿದ್ದು, ತಮ್ಮ ಈ ಪಕ್ಷ ವಿರೋಧಿ ಚಟುವಟಿಕೆಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಅಂತ ತಿಳಿಸಿದ್ದಾರೆ.
Watch Video: ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ? ಕಂಡಕ್ಟರ್ ಸಹಾಯದಿಂದ ಬದುಕಿದ ‘ಬಡ ಜೀವ’